ಇತರ ದೇವತೆಗಳು ಶಿವನ ಸಹಾಯಕ್ಕಾಗಿ ತಮ್ಮ ಶಕ್ತಿಯನ್ನು ಕಳುಹಿಸಿದಾಗ ಜನ್ಮತಾಳಿದವರೇ ಸಪ್ತಮಾತೃಕೆಯರಾದ ಬ್ರಾಹ್ಮೀ, ಮಹೇಶ್ವರೀ, ಕೌಮಾರಿ, ವೈಷ್ಣವಿ, ವಾರಾಹಿ, ಇಂದ್ರಾಣಿ ಹಾಗೂ ಚಾಮುಂಡಿ
ಅವರಲ್ಲಿ ವೈಷ್ಣವಿ, ಕೌಮಾರಿ, ಮಹೇಶ್ವರಿಯರು ಹಾಸನಾಂಬ ದೇವಾಲಯದಲ್ಲಿ ಹುತ್ತದ ರೂಪದಲ್ಲಿ ಹಾಗೂ ಬ್ರಾಹ್ಮೀದೇವಿಯು ಕೆಂಚಮ್ಮನ ಹೊಸಕೋಟೆಯಲ್ಲಿ ನೆಲೆಸಿದಳು
ಸಪ್ತಮಾತೃಕೆಯರು ಸದಾ ನಗುವ ದೇವತೆಯಾಗಿರುವ ಕಾರಣದಿಂದ ನಸುನಗುವ ದೇವತೆಗಳು ನೆಲೆಸಿರುವುದರಿಂದ ಹಸನ, ಹಾಸನವಾಗಿದೆ ಎನ್ನಲಾಗುತ್ತದೆ