ಹಿರಿಯ ನಟಿ ಲೀಲಾವತಿ ನಿಧನ!
ಆರಿತು ಕನ್ನಡ ಚಿತ್ರರಂಗದ 'ನಂದಾದೀಪ'
ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಕನ್ನಡದ ಹಿರಿಯ ನಟಿ ಲೀಲಾವತಿ ಕೊನೆಯುಸಿರೆಳೆದಿದ್ದಾರೆ.
ಲೀಲಾವತಿ ಇಹಲೋಕ ತ್ಯಜಿಸಿದ್ದು, ಇಡೀ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.
ಲೀಲಾವತಿ ಅವರು ವಯೋಸಹಜ ಕಾಯಿಲೆಗಳಿಂದ
ಬಳಲುತ್ತಿದ್ದರು.
ಕನ್ನಡದಲ್ಲಿ ಅಷ್ಟೇ ಅಲ್ಲ ತಮಿಳು, ತೆಲುಗು ಮತ್ತು ಮಲಯಾಳಂ ಸೇರಿದಂತೆ 600 ಚಿತ್ರಗಳಲ್ಲಿ ನಟಿಸಿದ್ದರು.
2008ರಲ್ಲಿ ತುಮಕೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿ ನೀಡಲಾಯ್ತು.
ಲೀಲಾವತಿ ಅವರ ಮಗ ವಿನೋದ್ ರಾಜ್ ಕನ್ನಡ ಚಿತ್ರರಂಗದ ಖ್ಯಾತ ನಟ.
ಪ್ರಸ್ತುತ ತಾಯಿ-ಮಗ ಇಬ್ಬರೂ ತೋಟಗಾರಿಕೆ ಮತ್ತು ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು.
ಲೀಲಾವತಿ, ಡಾ. ರಾಜ್ ಕುಮಾರ್ ಅವರೊಂದಿಗೆ ನಟಿಸಿದ ಮೊದಲ ಚಿತ್ರ ರಣಧೀರ ಕಂಠೀರವ.