2024ರ ಲೋಕಸಭಾ ಚುನಾವಣೆಗೆ ಇದೀಗ ಮುಹೂರ್ತ ಘೋಷಣೆಯಾಗಿದೆ

ಕರ್ನಾಟಕದಲ್ಲಿ ಎಲೆಕ್ಷನ್ ಯಾವಾಗ? ಎಷ್ಟು ಹಂತಗಳಲ್ಲಿ ಚುನಾವಣೆ ನಡೆಯುತ್ತೆ?

ಈ ಪ್ರಶ್ನೆಗಳಿಗೂ ಚುನಾವಣಾ ಆಯೋಗ ಉತ್ತರ ನೀಡಿದೆ

ಕರ್ನಾಟಕದಲ್ಲಿ ಒಟ್ಟು 2 ಹಂತಗಳಲ್ಲಿ ಎಲೆಕ್ಷನ್ ನಡೆಯಲಿದೆ. ಜೊತೆಗೆ ಒಂದು ಕ್ಷೇತ್ರಕ್ಕೆ ಉಪ ಚುನಾವಣೆ ಕೂಡ ನಡೆಯಲಿದೆ

Karnataka Election Commission: ರಾಜ್ಯದಲ್ಲಿ ಎಷ್ಟಿದ್ದಾರೆ ಮತದಾರರು? ಚುನಾವಣೆ ಅಧಿಕಾರಿಗಳು ಕೊಟ್ರು ಮಾಹಿತಿ

ರಾಜ್ಯದಲ್ಲಿ ಒಟ್ಟೂ 28 ಕ್ಷೇತ್ರಗಳಿದ್ದು, 2 ಹಂತಗಳಲ್ಲಿ ಎಲೆಕ್ಷನ್  ನಡೆಸುವುದಾಗಿ ಚುನಾವಣಾ ಆಯೋಗ ಹೇಳಿದೆ

ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಏಪ್ರಿಲ್ 26, ಶುಕ್ರವಾರದಂದು ನಡೆಯಲಿದೆ

ಎರಡನೇ ಹಂತದ ಚುನಾವಣೆ ಮೇ 7, ಮಂಗಳವಾರದಂದು ನಡೆಯಲಿದೆ

14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, 

ಉಡುಪಿ-ಚಿಕ್ಕಮಗಳೂರು, ಕೋಲಾರ, ಚಾಮರಾಜನಗರ, ಮಂಡ್ಯ, ಹಾಸನ, ದಕ್ಷಿಣ ಕನ್ನಡ, ಮೈಸೂರು-ಕೊಡಗು, ತುಮಕೂರು, ಚಿತ್ರದುರ್ಗ, 

ಚಿಕ್ಕಬಳ್ಳಾಪುರದಲ್ಲಿ ಮೊದಲ ಹಂತದಲ್ಲಿ ಅಂದರೆ ಏಪ್ರಿಲ್ 26ರಂದು ಚುನಾವಣೆ ನಡೆಯಲಿದೆ

ಇನ್ನುಳಿದ 14 ಕ್ಷೇತ್ರಗಳಲ್ಲಿ 2ನೇ ಹಂತದ ಚುನಾವಣೆ ನಡೆಯಲಿದೆ. ಕಲಬುರಗಿ, ಬೀದರ್, ರಾಯಚೂರು, ದಾವಣಗೆರೆ, ಧಾರವಾಡ, ಕೊಪ್ಪಳ, ಬೆಳಗಾವಿ, ಬಳ್ಳಾರಿ, ಚಿಕ್ಕೋಡಿ,

ಬಾಗಲಕೋಟೆ, ವಿಜಯಪುರ, ಹಾವೇರಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗದಲ್ಲಿ ಮೇ 7ರಂದು 2ನೇ ಹಂತದಲ್ಲಿ ಚುನಾವಣೆ ನಡೆಯಲಿದೆ

ದೇಶಾದ್ಯಂತ ಒಟ್ಟೂ 7 ಹಂತಗಳಲ್ಲಿ ಎಲೆಕ್ಷನ್ ನಡೆಯಲಿದೆ. ಜೂನ್ 4ರಂದು ಚುನಾವಣೆಯ ಫಲಿತಾಂಶ ಹೊರಬಿಳಲಿದೆ