ಶೃಂಗೇರಿ ಶಾರದಾ ಮಠಕ್ಕೆ ಕೇಂದ್ರ ವಿತ್ತ ಸಚಿವೆ ಭೇಟಿ!
ಚಿಕ್ಕಮಗಳೂರು ಶೃಂಗೇರಿ ಶಾರದಾ ಮಠಕ್ಕೆ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಭೇಟಿ
ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ, ದೇವಿ ದರ್ಶನ ಪಡೆದರು.
ಕುಟುಂಬ ಸಮೇತರಾಗಿ ಶೃಂಗೇರಿ ಶಾರದಾ ಮಠಕ್ಕೆ ಭೇಟಿ ನೀಡಿದ ನಿರ್ಮಲ ಸೀತಾರಾಮನ್
ಶನಿವಾರ ಶೃಂಗೇರಿ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ, ದೇವಿ ದರ್ಶನ ಪಡೆದರು.
ಬಳಿಕ ನಿರ್ಮಲಾ ಸೀತಾರಾಮನ್ ಅವರು ಉಭಯ ಜಗದ್ಗುರುಗಳ ಆಶೀರ್ವಾದ ಪಡೆದರು.
ಶೃಂಗೇರಿ ಮಠದಲ್ಲಿ ವಾಸ್ತವ್ಯ ಹೂಡಿದ್ದ ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್
ತಾಯಿ ಶಾರದಾಂಬೆ ದರ್ಶನ ಪಡೆದು ಶನಿವಾರ ಸಂಜೆ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯಸಭೆಗೆ ಕರ್ನಾಟಕದಿಂದ ಆಯ್ಕೆ ಆಗಿದ್ದಾರೆ.
ವಿತ್ತ ಸಚಿವೆ ಶೃಂಗೇರಿಯಲ್ಲಿ ಮಠದ ಕುರಿತು ಅರ್ಚಕರಿಂದ ಕನ್ನಡದಲ್ಲೇ ಮಾಹಿತಿ ಪಡೆದುಕೊಂಡರು.