ಪತ್ನಿ ಮಕ್ಕಳ ಜೊತೆ ವರಮಹಾಲಕ್ಷ್ಮಿ ಹಬ್ಬ ಆಚರಿಸಿದ ಯಶ್!

ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್ ಯಶ್ ಮನೆಯಲ್ಲೂ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ಸಾಂಪ್ರದಾಯಿಕ ಉಡುಗೆಯಲ್ಲಿಯೇ ಯಶ್ ಹಾಗೂ ರಾಧಿಕಾ ಪಂಡಿತ್ ಹಬ್ಬವನ್ನ ಸೆಲೆಬ್ರೇಟ್ ಮಾಡಿದ್ದಾರೆ.

ರಾಧಿಕಾ ಪಂಡಿತ್ ಸುಂದರವಾದ ಸೀರೆ ಉಟ್ಟುಕೊಂಡು ಗಮನ ಸೆಳೆದಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಹಬ್ಬದ ದಿನ ಪಂಚೆ ಮತ್ತು ಶರ್ಟ್ ಧರಿಸಿಕೊಂಡು ಗಮನ ಸೆಳೆದಿದ್ದಾರೆ.

ಪತ್ನಿ ರಾಧಿಕಾ ಪಂಡಿತ್ ಅವರಿಗೆ ಯಶ್ ಕುಂಕುಮ ಹಚ್ಚಿದ್ದಾರೆ.

ರಾಧಿಕಾ ಪಂಡಿತ್ ಮತ್ತು ಯಶ್ ಜೊತೆಗೂಡಿಯೇ ವರಮಹಾಲಕ್ಷ್ಮಿಗೆ ಆರತಿ ಮಾಡಿದ್ದಾರೆ.

ರಾಧಿಕಾ ಪಂಡಿತ್- ಯಶ್ ಹಾಗೂ ಮಕ್ಕಳು ಕುಳಿತು ಪೂಜೆ ಸಲ್ಲಿಸುತ್ತಿದ್ದಾರೆ.

ವರಮಹಾಲಕ್ಷ್ಮಿ ಪೂಜೆಯನ್ನ ರಾಧಿಕಾ - ಯಶ್ ವಿಶೇಷವಾಗಿಯೇ ಸೆಲೆಬ್ರೇಟ್ ಮಾಡಿದ್ದಾರೆ.

ಈ ಫೋಟೋಗಳನ್ನ ರಾಧಿಕಾ ಪಂಡಿತ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ  ಹಂಚಿಕೊಂಡಿದ್ದಾರೆ.

ಈ ಮೂಲಕ ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯವನ್ನ ಕೂಡ ಕೋರಿದ್ದಾರೆ.