ಕಾಂಗ್ರೆಸ್​ನ ಗ್ಯಾರಂಟಿಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಇಂದು ಮೈಸೂರಿನಲ್ಲಿ ಚಾಲನೆ ಸಿಗಲಿದೆ

ಇದಕ್ಕಾಗಿ ಅದ್ಧೂರಿ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಲಿದ್ದಾರೆ

ಹೀಗಿರುವಾಗ ಆನೇಕಲ್​ನಲ್ಲಿ ನಡೆದ ಗೃಹಲಕ್ಷ್ಮಿ ಕಾರ್ಯಕ್ರಮದಲ್ಲಿ ಯಡವಟ್ಟು ಆಗಿದೆ

ಸರಿಯಾಗಿ ಶಾಮಿಯಾನ ವ್ಯವಸ್ಥೆ ಕಲ್ಪಿಸದ ಹಿನ್ನೆಲೆ

ಗೃಹಲಕ್ಷ್ಮಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಹಿಳೆ ತಲೆ ಮೇಲೆ ಬಿದ್ದ ಹಲಸಿನಕಾಯಿ 

ಬಿಸಿಲಿನ ಝಳಕ್ಕೆ ಮರದ ಕೆಳಗೆ ಕುಳಿತಿದ್ದಾಗ ನಡೆದ ಘಟನೆ ಇದು

ಮಹಿಳೆಯರು ಕುಳಿತುಕೊಳ್ಳುವ ಜಾಗದಲ್ಲಿ ಪೆಂಡಲ್ ಹಾಕಿರಲಿಲ್ಲ

ಕೂಡಲೇ ಅಲ್ಲಿದ್ದ ಮಹಿಳೆಯರಿಂದ ಹಾರೈಕೆ ಮಾಡಲಾಗಿತ್ತು

ಮತ್ತು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಹಿಳೆಯನ್ನ ಆರೋಗ್ಯ ಇಲಾಖೆ ಸಿಬ್ಬಂದಿ ಕರೆದೊಯ್ದ 

ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು