ಕನ್ನಡ ಬಿಗ್ ಬಾಸ್ ಸೀಸನ್ 10 ಇನ್ನೇನು ಆರಂಭವಾಗಲಿದೆ

ಈಗಾಗಲೇ ಹಲವು ಪ್ರೋಮೋಗಳನ್ನು ಬಿಡುಗಡೆ ಮಾಡುವ ಮೂಲಕ  ಪ್ರೇಕ್ಷಕರಲ್ಲಿ ಬಿಗ್ ಬಾಸ್ ಸೀಸನ್ 10ರ ಕುತೂಹಲವನ್ನುಂಟು ಮಾಡುತ್ತಿದೆ

ಈಗಾಗಲೇ ಬಿಗ್ ಬಾಸ್ ಯಾವಾಗಿಂದ ಶುರುವಾಗುತ್ತದೆ ಎನ್ನುವ ಮಾಹಿತಿಯನ್ನು ಹಂಚಿಕೊಂಡಿದೆ. ಈಗ ಪ್ರಸಾರದ ವೇಳೆಯನ್ನೂ ಸಹ ಹೇಳಿಕೊಂಡಿದೆ

ಅಕ್ಟೋಬರ್ 8 ರಿಂದ ಪ್ರಾರಂಭವಾಗುವ ಬಿಗ್ ಬಾಸ್ ಶೋ, ಮೊದಲ ದಿನ ಸಂಜೆ ಆರು ಗಂಟೆಗೆ ಪ್ರಸಾರವಾಗಲಿದೆ

ಟಾಲಿವುಡ್‌ನಲ್ಲಿ ರುಕ್ಮಿಣಿ ವಸಂತ್​ಗೆ ಡಿಮ್ಯಾಂಡ್!

ಮರುದಿನದಿಂದ ಪ್ರತಿ ರಾತ್ರಿ  9.30ಕ್ಕೆ ಕಾರ್ಯಕ್ರಮ ಪ್ರಸಾರವಾಗಲಿದೆ ಎಂದು ವಾಹಿನಿಯು ರಿಲೀಸ್ ಮಾಡಿದ ಪ್ರೋಮೋದಲ್ಲಿ ತಿಳಿಸಲಾಗಿದೆ

ಇದಕ್ಕಾಗಿಯೇ ವಿಶೇಷ ಪ್ರೋಮೋ ಕೂಡ ತಂಡ ರಿಲೀಸ್​ ಮಾಡಿದೆ

ಕಿರುತೆರೆ ಅತೀ ದೊಡ್ಡ ರಿಯಾಲಿಟಿ ಶೋ ಆಗಿರುವ ಬಿಗ್ ಬಾಸ್ ಯಾವಾಗ ಎಂಬುದಕ್ಕೆ ಈಗಾಗಲೇ ಉತ್ತರ ಸಿಕ್ಕಿದ್ದು ಜನ ಫುಲ್​ ಖುಷ್​ ಆಗಿದ್ದಾರೆ

ಅಕ್ಟೋಬರ್ 8ರಿಂದ ‘ಬಿಗ್ ಬಾಸ್ ಕನ್ನಡ ಸೀಸನ್ 10’ ಶೋ ಆರಂಭವಾಗಲಿದೆ

ವಾಹಿನಿಯ ‘ಅನುಬಂಧ 2023’ ಅವಾರ್ಡ್ಸ್ ಸಮಾರಂಭದಲ್ಲಿ ಬಿಗ್ ಬಾಸ್ ಯಾವಾಗ ಶುರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ

ಕನ್ನಡ ಬಿಗ್ ಬಾಸ್ ಸೀಸನ್ 10 ಇನ್ನೇನು ಆರಂಭವಾಗಲಿದೆ

ಯಾರೆಲ್ಲಾ ಬಿಗ್ ಬಾಸ್ ಮನೆಯೊಳಗಡೆ ಹೋಗಲಿದ್ದಾರೆ ಎಂಬ ಪ್ರಶ್ನೆ ಏಳೋದು ಸಹಜ

ಮೊದಲ ಬಾರಿಗೆ ಬಿಗ್ ಬಾಸ್ ಮನೆ ಪ್ರವೇಶ ಮಾಡುವ ಮೊದಲ ಸ್ಪರ್ಧಿಯನ್ನು ಕಲರ್ಸ್ ವಾಹಿನಿ ರಿವೀಲ್ ಮಾಡಿದೆ

ಬೆಸ್ಟ್ ರೇಟೆಡ್ ಚಲನಚಿತ್ರ – 777 ಚಾರ್ಲಿ. ಬಿಗ್ ಬಾಸ್ ಕನ್ನಡ ಸೀಸನ್ 10 ಮೊದಲ ಕಂಟೆಸ್ಟೆಂಟ್ ಆಗಿ ಎಂಟ್ರಿ ಕೊಡ್ತಿರೋ ಚಾರ್ಲಿ!! 

ಅಭಿನಂದನೆಗಳು ಚಾರ್ಲಿ ಎಂದು ವಾಹಿನಿಯ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಈ ಮೂಲಕ ಚಾರ್ಲಿ ಮೊದಲ ಸ್ಪರ್ಧಿಯಾಗಿ ದೊಡ್ಮನೆಗೆ ಕಾಲಿಡುತ್ತಿದೆ