ಕೇರಳದಲ್ಲಿ ಭೀಕರ ಗುಡ್ಡ ಕುಸಿತ, ಸಾವಿನ ಸಂಖ್ಯೆ 84ಕ್ಕೇರಿಕೆ!
ವಯನಾಡಿನಲ್ಲಿ ಭೀಕರ ಮಳೆಗೆ ಗುಡ್ಡ ಕುಸಿತ, ಸಾವಿನ ಸಂಖ್ಯೆ 84ಕ್ಕೇರಿಕೆ, 100ಕ್ಕೂ ಹೆಚ್ಚು ಮಂದಿ ಕಣ್ಮರೆ
ಕೇರಳದ ವಯನಾಡು ಜಿಲ್ಲೆಯಲ್ಲಿ ಭಾರೀ ಭೂಕುಸಿತ ಸಂಭವಿಸಿದೆ.
ಇದರಲ್ಲಿ 84 ಮಂದಿ ಸಾವನ್ನಪ್ಪಿದ್ದಾರೆ. ನೂರಾರು ಮಂದಿ ಸಿಲುಕಿದ್ದಾರೆ ಎಂದು ಹೇಳಲಾಗುತ್ತಿದೆ.
ಚುರಲ್ಮಲಾ ನಗರದಲ್ಲಿ ನೂರಾರು ಮನೆಗಳು, ವಾಹನಗಳು, ಅಂಗಡಿಗಳು ನೀರಿನಲ್ಲಿ ಮುಳುಗಿವೆ.
ರಕ್ಷಣೆಗಾಗಿ ರಾಜ್ಯ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ.
ಇದೇ ವೇಳೆ ನಿರಂತರ ಮಳೆಯಿಂದಾಗಿ ರಕ್ಷಣಾ ತಂಡ ಸಾಕಷ್ಟು ಸಮಸ್ಯೆ ಎದುರಿಸುತ್ತಿದೆ.
ಘಟನೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಕೇರಳ ಸಿಎಂ ಜೊತೆ ಮಾತನಾಡಿದ್ದಾರೆ.
ಮೃತರ ಕುಟುಂಬಗಳಿಗೆ ಪ್ರಧಾನಿ ಪರಿಹಾರ ಘೋಷಿಸಿದ್ದಾರೆ ಎಂದು PMO ಕಚೇರಿ ತಿಳಿಸಿದೆ.
ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ ಮೃತರ ಕುಟುಂಬಕ್ಕೆ 2 ಲಕ್ಷ ರೂ ಘೋಷಿಸಿದೆ.