ಮಹಾಮಳೆಗೆ ಮುಳುಗುತ್ತಿದೆ ಬೆಂಗಳೂರು! ಮನೆ ಒಳಗೂ ನೀರು, ಹೊರಗೂ ನೀರು!

ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಪ್ರತಿದಿನವೂ ಮಳೆಯ ಆರ್ಭಟ ಜೋರಾಗಿದೆ.

ಬೆಂಗಳೂರಿನಲ್ಲಿ ಇನ್ನೂ ಎರಡು ದಿನಗಳ ಕಾಲ ಕಾಲ ಭಾರೀ ಮಳೆಯಾಗಲಿದೆ.

ಬೆಂಗಳೂರಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆ ಅವಾಂತರವನ್ನೇ ಸೃಷ್ಟಿ ಮಾಡಿದೆ,

ಯಲಹಂಕದ ಕೂರ್ಲಪ್ಪ ಬಡಾವಣೆ ಸಂಪೂರ್ಣ ಜಲಾವೃತವಾಗಿದೆ.

ಮನೆಯೊಳಗೆ ಮಳೆ ನೀರು ನುಗ್ಗಿದ್ದು, ನೀರು ಹೊರ ಹಾಕಲು ಜನರು ಪರದಾಡಿದ್ದಾರೆ.

ರಸ್ತೆ ಬದಿ ನಿಂತಿದ್ದ ವಾಹನಗಳು ಮುಳುಗಡೆಯಾಗಿದ್ದು BBMP ನಿರ್ಲಕ್ಷ್ಯಕ್ಕೆ ಜನರು ಹಿಡಿಶಾಪ ಹಾಕ್ತಿದ್ದಾರೆ.

ರಾಜ್ಯದಲ್ಲಿ ಮುಂದಿನ 2 ದಿನಗಳ ಕಾಲ ಮಳೆ ಆಗಲಿದೆ ಅಂತಾ ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೆಂಗೇರಿಯ ಬಸ್ ಸ್ಟ್ಯಾಂಡ್ ಪಕ್ಕದ ಕೆರೆಯಲ್ಲಿ ಅಣ್ಣ-ತಂಗಿ ಕೆರೆಯಲ್ಲಿ ನಾಪತ್ತೆಯಾಗಿದ್ದಾರೆ.

ಭಾರೀ ಮಳೆಯಿಂದಾಗಿ ಸರ್ಜಾಪುರ ಮುಖ್ಯ ರಸ್ತೆ ಮತ್ತೆ ನೀರಿನಿಂದ ಮುಳುಗಡೆಯಾಗಿದೆ.