ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯದ ಪೊಲೀಸರಿಂದ ದರ್ಶನ ಬಂಧನವಾಗಿದೆ.

ದರ್ಶನ್ ನೇತೃತ್ವದಲ್ಲಿ ಓರ್ವನನ್ನು ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿರುವ ಆರೋಪದ ಹಿನ್ನೆಲೆ ಬಂಧಿಸಲಾಗಿದೆ.  

ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನ‌ ಕೊಲೆ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿದ್ದಾರೆ ಎನ್ನಲಾಗ್ತಿದೆ.  

ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದ ರೇಣುಕಾಸ್ವಾಮಿ ಅವರನ್ನು ಕೊಲೆ ಮಾಡಲಾಗಿದೆ.

ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ಆಗಿತ್ತು. 

ದರ್ಶನ್ ಸೂಚನೆಯಂತೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಬಾಯ್ಬಿಟ್ಟಿದ್ದಾರೆ.

ಮೃತನಿಗೆ ಹಲ್ಲೆ ನಡೆಸಿರುವ ಸಮಯದಲ್ಲಿ ನಟ ದರ್ಶನ್ ಕೂಡ ಸ್ಥಳದಲ್ಲೇ ಇದ್ದರು ಎಂಬ ಆರೋಪ ವ್ಯಕ್ತವಾಗಿದೆ.

ಆತನನ್ನು ಕೊಲೆ ಮಾಡಿದ ಬಳಿಕ ಮೃತದೇಹವನ್ನು ಕಾಮಾಕ್ಷಿಪಾಳ್ಯದ ಡ್ರೈನೇಜ್ ಬಳಿ ಎಸೆದು ಹೋಗಿದ್ದರು.

ಕೊಲೆಗೈದ ಆರೋಪಿಗಳು ಬೆಂಗಳೂರಿನ ಗಿರಿನಗರ ಮೂಲದವರು ಎಂದು ಹೇಳಲಾಗ್ತಿದೆ.

ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್‌ ಅವರನ್ನು ಪೊಲೀಸರು ಬೆಳ್ಳಂಬೆಳಗ್ಗೆ ಬಂಧನ ಮಾಡಿದ್ದಾರೆ.