ಕಳೆದ ಶನಿವಾರ ಟಿ20 ವಿಶ್ವಕಪ್ ನ ಫೈನಲ್ ನಡೆದು, ಭಾರತ ತಂಡ ರೋಚಕ ಜಯದೊಂದಿಗೆ ವಿಶ್ವಕಪ್ ಗೆ ಮುತ್ತಿಕ್ಕಿದೆ.
ಪ್ರತಿ ಎಸೆತವೂ ಪಂದ್ಯದ ಗತಿ ಬದಲಿಸುವಂತಿದ್ದುದ್ದರಿಂದ ಇಡೀ ದೇಶವೇ ಫೈನಲ್ ಪಂದ್ಯವನ್ನು ನಿಬ್ಬೆರಗಾಗಿ ವೀಕ್ಷಿಸಿದೆ.
ಮೂರು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ 9.30ರ ವಿಮಾನ ಹತ್ತಿ ಬೆಂಗಳೂರಿಗೆ ವಾಪಾಸಾಗಬೇಕಿತ್ತು.
ಇದೆಲ್ಲದರ ನಡುವೆ ಅವರಿಗೆ ಸಿಕ್ಕಿದ್ದು ಕೆಲವೇ ಕೆಲವು ನಿಮಿಷಗಳು ಮಾತ್ರ, ಅದೇ ಅಲ್ಪ ಬಿಡುವಿನ ಸಮಯದಲ್ಲಿ ವಿಮಾನದ ಬಾಗಿಲಲ್ಲಿ ನಿಂತು ವಿಶ್ವಕಪ್ ಟಿ20 ಫೈನಲ್ ಪಂದ್ಯ ವೀಕ್ಷಿಸಿ ಅದನ್ನು ತಮ್ಮ ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದರು.
ಅದರ ಜೊತೆಗೆ ಭಾರತವು ಸಂಘಟಿತ ಪ್ರದರ್ಶನದ ಮೂಲಕ ವಿಶ್ವಕಪ್ ಗೆದ್ದು ಬರಲಿ ಎಂದು ಮನದುಂಬಿ ಹಾರೈಸಿದ್ದರು.
ಈ ರೀತಿ ಸಿದ್ದರಾಮಯ್ಯನವರು ಶೇರ್ ಮಾಡಿದ್ದ ವೀಡಿಯೋ ಇದೀಗ ಜಾಲತಾಣದಲ್ಲಿ ಭಾರೀ ಹವಾ ಸೃಷ್ಟಿಸಿದೆ. ಈ ವರೆಗೆ ವೀಡಿಯೋವನ್ನು 70 ಲಕ್ಷಕ್ಕೂ ಅಧಿಕ ಜನ ವೀಕ್ಷಿಸಿದ್ದಾರೆ, 1,30,000 ಮಂದಿ ಸಿದ್ದರಾಮಯ್ಯನವರ ಕ್ರಿಕೆಟ್ ಪ್ರೇಮಕ್ಕೆ ಲೈಕ್ ಒತ್ತಿ ಮೆಚ್ಚಿದ್ದಾರೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಐಪಿಎಲ್, ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೆ ಹೋಗಿ ಪಂದ್ಯ ವೀಕ್ಷಿಸಿ ಆಟಗಾರರಿಗೆ ಚಪ್ಪಾಳೆಯ ಮೂಲಕ ಹುರಿದುಂಬಿಸುತ್ತಿದ್ದ ಸಿದ್ದರಾಮಯ್ಯನವರು ಬಿಡುವಿರದ ದಿನಚರಿಯ ಕಾರಣಕ್ಕೆ ವಿಮಾನದ ಬಾಗಿಲಲ್ಲಿ ನಿಂತು ಕ್ರಿಕೆಟ್ ವೀಕ್ಷಿಸಿದ್ದಕ್ಕೆ ಕರುನಾಡು ಕೊಂಡಾಡುತ್ತಿದೆ.
ಒಂದೆಡೆ ಭಾರತ ವಿಶ್ವಕಪ್ ಗೆದ್ದಿದೆ, ಇನ್ನೊಂದೆಡೆ ಸಿದ್ದರಾಮಯ್ಯನವರು ನಾಡಿನ ಕ್ರಿಕೆಟ್ ಪ್ರಿಯರ ಮನ ಗೆದ್ದಿದ್ದಾರೆ
Rohit Sharma, Virat Kohli: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ನಡುವೆ ಯಾರು ಹೆಚ್ಚು ವಿದ್ಯಾವಂತರು? ಯಾರಿಗೂ ಗೊತ್ತಿರದ ಸಂಗತಿ ಇದು!