ಹಳೆಯ ವಾಹನಗಳಿಗೆ ಹೈ-ಸೆಕ್ಯುರಿಟಿ ನಂಬರ್ ಪ್ಲೇಟ್‌ (HSRP) ಅಳವಡಿಕೆಗೆ ರಾಜ್ಯ ಸರ್ಕಾರ ನೀಡಿದ್ದ ಗಡುವನ್ನು ವಿಸ್ತರಣೆ ಮಾಡಲಾಗುತ್ತದೆ

ಈ ಬಗ್ಗೆ ಶೀಘ್ರವೇ ಆದೇಶ ಹೊರಡಿಸಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಇಂದು ಸದನದಲ್ಲಿ ಮಾಹಿತಿ ನೀಡಿದ್ದಾರೆ

ಇಂದು ಪರಿಷನತ್ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತಂತೆ ಶಾಸಕ ಮಧು ಮಾದೇಗೌಡ ಅವರು ಸರ್ಕಾರಕ್ಕೆ ಪ್ರಶ್ನೆಗಳನ್ನು ಮುಂದಿಟ್ಟಿದ್ದರು

18 ಲಕ್ಷ ವಾಹನಗಳಷ್ಟೇ ಈಗ ನೋಂದಣಿ ಆಗಿವೆ. ಆದ್ದರಿಂದ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸುವಂತೆ ಸರ್ಕಾರಕ್ಕೆ ಮಧು ಮಾದೇಗೌಡ ಅವರು ಮನವಿ ಸಲ್ಲಿಸಿದ್ದರು

5 ಲಕ್ಷ ಬಾರಿ ‘ಸೀತಾರಾಮ್’ ಬರೆದರೆ ಅಯೋಧ್ಯೆಯ ಈ ಬ್ಯಾಂಕ್‌ನಲ್ಲಿ ಸಿಗುತ್ತೆ ಖಾತೆ!

ಮಧು ಮಾದೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ರಾಮಲಿಂಗಾ ರೆಡ್ಡಿ ಅವರು, ಇದುವರೆಗೂ 18 ಲಕ್ಷ ವಾಹನಗಳಿಗೆ ಮಾತ್ರ ಎಚ್​​ಎಸ್​​​ಆರ್​ಪಿ ಬೋರ್ಡ್​ಗಳನ್ನು ಅಳವಡಿಕೆ ಮಾಡಲಾಗಿದೆ

ಕೇಂದ್ರ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್ ಸೂಚನೆ ಅನ್ವಯ ದೇಶದ ಎಲ್ಲಾ ಭಾಗಗಳಲ್ಲೂ ಹೀಗಾಗಲೇ ಅಳಡಿಸಿಕೊಳ್ಳಲಾಗಿದೆ

ನಮ್ಮಲ್ಲಿ ಮಾತ್ರ ತಡ ಆರಂಭವಾಗಿದೆ. ಆದ್ದರಿಂದ ಅಂತಿಮ ದಿನಾಂಕವನ್ನು ಮುಂದಕ್ಕೆ ಹಾಕಬೇಕಾದ ಸ್ಥಿತಿ ಎದುರಾಗಿದೆ, ಆದ್ದರಿಂದ ಮೂರು ತಿಂಗಳು ಮಂದಕ್ಕೆ ಹಾಕುತ್ತೇವೆ ಎಂದು ಸದನಕ್ಕೆ ತಿಳಿಸಿದರು

ಈ ವೇಳೆ ಮಧ್ಯ ಪ್ರವೇಶಿಸಿದ ಮಧು ಮಾದೇಗೌಡ ಅವರು, ನಂಬರ್ ಪ್ಲೇಟ್ ಅಳವಡಿಕೆ ಮಾಡುವ ಬಗ್ಗೆ ಫೇಕ್ ಜಾಹೀರಾತುಗಳು ಹೆಚ್ಚಾಗುತ್ತಿದೆ

ಇದರಿಂದ ಬಹಳಷ್ಟು ಜನರು ತಮ್ಮ ಹಣವನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಕೂಡಲೇ ಸರ್ಕಾರ ಗಮನ ಹರಿಸಿ ಫೇಕ್ ಜಾಹೀರಾತುಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದರು

ಇದಕ್ಕೆ ಉತ್ತರಿಸಿದ ಸಚಿವರು, ಆನ್ ಲೈನ್ ವಂಚನೆ ಬಗೆಗೂ ಗಮನಹರಿಸುತ್ತೇವೆ. ಆದರೆ ಇದುವರೆಗೂ ನಂಬರ್ ಪ್ಲೇಟ್ ಅಳವಡಿಕೆ ಮಾಡುವ ಕಾರ್ಯ ಪಾರದರ್ಶಕವಾಗಿ ನಡೆಯುತ್ತಿದೆ 

ಎಲ್ಲೂ ನೇರ ಹಣ ಪಾವತಿ ಮಾಡುವ ವ್ಯವಸ್ಥೆ ಇಲ್ಲ, ಎಲ್ಲವೂ ಆನ್​ಲೈನ್ ಮೂಲಕವೇ ಮಾಡುತ್ತಿದ್ದೇವೆ. ಈ ಬಗ್ಗೆ ಹೆಚ್ಚಿನ ಜಾಹೀರಾತು ನೀಡಿ ಜನರಿಗೆ ಅರಿವು ಮಾಡಿಸುವ ಕಾರ್ಯ ಮಾಡುತ್ತೇವೆ

ಮುಂದಿನ ಮೂರು ತಿಂಗಳಿನಲ್ಲಿ ಈ ಕಾರ್ಯವನ್ನು ಮುಗಿಸಲು ಕ್ರಮಕೈಗೊಳ್ಳುತ್ತೇವೆ ಎಂದು ರಾಮಲಿಂಗಾ ರೆಡ್ಡಿ ತಿಳಿಸಿದರು

ಹಳೆಯ ವಾಹನಗಳಿಗೆ ಹೈ-ಸೆಕ್ಯುರಿಟಿ ನಂಬರ್ ಪ್ಲೇಟ್‌ (HSRP) ಅಳವಡಿಕೆಗೆ ರಾಜ್ಯ ಸರ್ಕಾರ ನೀಡಿದ್ದ ಗಡುವನ್ನು ವಿಸ್ತರಣೆ ಮಾಡಲಾಗುತ್ತದೆ