ಮದುವೆ ಮತ್ತು ಮಕ್ಕಳ ನಂತರವೂ ನಟಿ ಕರೀನಾ ಕಪೂರ್ ಮೊದಲಿನಂತೆ ಚಿತ್ರರಂಗದಲ್ಲಿ ಆ್ಯಕ್ಟಿವ್ ಆಗಿದ್ದಾರೆ. ಇದೀಗ ನಟಿ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಿದ್ದಾರೆ.
ನಟಿ ಕರೀನಾ ಕಪೂರ್ ಅನೇಕ ಬ್ಯುಸಿನೆಸ್ ಗಳಲ್ಲಿ ಪಾಲುದಾರರಾಗಿದ್ದಾರೆ. ಅಷ್ಟೇ ಅಲ್ಲ.ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯರಲ್ಲಿ ಈ ನಟಿ ಮೊದಲ ಸ್ಥಾನದಲ್ಲಿದ್ದಾರೆ.
ನಟಿ ಕರೀನಾ ಕಪೂರ್ ವರ್ಷಕ್ಕೆ 20 ಕೋಟಿ ಟಾಕ್ಸ್ ಕಟ್ಟುತ್ತಿದ್ದಾರೆ ಎನ್ನಲಾಗ್ತಿದೆ. ಈ ನಟಿ ಬ್ರಾಂಡ್ ಪ್ರಚಾರ, ವ್ಯಾಪಾರ ಮತ್ತು ರಿಯಲ್ ಎಸ್ಟೇಟ್ ವ್ಯವಹಾರದ ಮೂಲಕ ಹಣವನ್ನು ಗಳಿಸುತ್ತಿದ್ದಾರೆ.