ರಾಜ್ಯದ ಜನತೆಗೆ ಗ್ಯಾರಂಟಿ ಬರೆ! ಪೆಟ್ರೋಲ್, ಡೀಸೆಲ್ ದರ ಏರಿಸಿದ ಸಿದ್ದು ಸರ್ಕಾರ

ಪೆಟ್ರೋಲ್‌ಗೆ 3 ರೂ., ಡೀಸೆಲ್‌ಗೆ 3.5 ರೂ. ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.

ಲೋಕಸಭಾ ಚುನಾವಣೆಯ ಬೆನ್ನಲ್ಲೇ ವಾಹನ ಸವಾರರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ.  

ಈ ಕ್ಷಣದಿಂದಲೇ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಹೊಸ ಭಾರತೀಯ ತೈಲ ಬೆಲೆಗಳನ್ನು ಬಿಡುಗಡೆ ಮಾಡುತ್ತವೆ.

ರಾಜ್ಯ ಸರ್ಕಾರಗಳು ವಿಧಿಸುವ ವ್ಯಾಟ್‌ನಿಂದ ರಾಜ್ಯಗಳಿಗೆ ಅನುಗುಣವಾಗಿ ಇಂಧನ ಬೆಲೆಗಳು ಬದಲಾಗುತ್ತವೆ.

ದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿದೆ.

ಕಳೆದ ಬಾರಿ ಮಾರ್ಚ್‌ನಲ್ಲಿ ದೇಶದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ 2 ರೂಪಾಯಿ ಇಳಿಕೆಯಾಗಿತ್ತು.

ಕಚ್ಚಾ ತೈಲ ಬೆಲೆಗಳಲ್ಲಿನ ಏರಿಳಿತಗಳು ಭಾರತದಲ್ಲಿ ಇಂಧನ ಬೆಲೆಗಳಲ್ಲಿ ಬದಲಾವಣೆಗಳನ್ನು ಉಂಟುಮಾಡುತ್ತವೆ.

ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ನ ಇತ್ತೀಚಿನ ದರಗಳನ್ನು SMS ಮೂಲಕವೂ ತಿಳಿದುಕೊಳ್ಳಬಹುದು.