ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್; ಸಂಸದ ಸ್ಥಾನದಿಂದ ಅನರ್ಹ

2019ರ ಚುನಾವಣೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದಿಂದ JDS ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡಿದ್ದರು.

ಹಾಸನ ಲೋಕಸಭಾ ಕ್ಷೇತ್ರದ ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣರನ್ನು ಅನರ್ಹಗೊಳಿಸಿ ಹೈಕೋರ್ಟ್ ಆದೇಶಿಸಿದೆ.

ಚುನಾವಣಾ ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಪ್ರಜ್ವಲ್ ರೇವಣ್ಣ

ಸುಳ್ಳು ಆದಾಯ ಪ್ರಮಾಣ ಪತ್ರ ಸಲ್ಲಿಕೆ ಆರೋಪ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಕೇಳಿ ಬಂದಿತ್ತು.

ಈ ಮೊದಲು ಹಾಸನ ಕ್ಷೇತ್ರವನ್ನು ಮಾಜಿ ಪ್ರಧಾನಿಗಳಾದ ಹೆಚ್ ಡಿ ದೇವೇಗೌಡರು ಪ್ರತಿನಿಧಿಸುತ್ತಿದ್ದರು.

ಮೊಮ್ಮಗನಿಗಾಗಿ ದೇವೇಗೌಡರು ಕ್ಷೇತ್ರ ಬಿಟ್ಟುಕೊಟ್ಟು ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಿದ್ದರು.

JDS ಪಕ್ಷದಿಂದ ಸ್ಪರ್ಧೆ ಮಾಡಿದ್ದ ಪ್ರಜ್ವಲ್ ರೇವಣ್ಣ ಅವರಿಗೆ ಚುನಾವಣೆಯಲ್ಲಿ 6,76,606 ಮತಗಳು ಸಿಕ್ಕಿತ್ತು.

ಬಿಜೆಪೆಯಿಂದ ಸ್ಪರ್ಧೆ ಮಾಡಿದ್ದ ಎ ಮಂಜು ಅವರು 1,41, 324 ಮತಗಳ ಅಂತರದಿಂದ ಸೋಲುಂಡಿದ್ದರು.

ಪ್ರಕರಣದ ಸಂಬಂಧ ಹೈಕೋರ್ಟ್ ಗೆ ಹಾಜರಾಗಿದ್ದ ಪ್ರಜ್ವಲ್ ರೇವಣ್ಣ ಅವರು ತಮ್ಮ ಹೇಳಿಕೆಯನ್ನು ದಾಖಲಿಸಿದ್ದರು.