ಕೇಂದ್ರ ಬಜೆಟ್: ಯಾವುದು ಏರಿಕೆ? ಯಾವುದು ಇಳಿಕೆ?
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತವಾಗಿ 7ನೇ ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ.
ಇಂದಿನ ಬಜೆಟ್‌ನಲ್ಲಿ ಯಾವುದರ ಬೆಲೆ ಕಡಿಮೆಯಾಗಿದೆ? ಯಾವುದರ ಬೆಲೆ ಏರಿಕೆ ಆಗಿದೆ ಅನ್ನೋದರ ವಿವರ ಇಲ್ಲಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಮೂರನೇ ಅವಧಿಯ ಮೊದಲ ಬಜೆಟ್ ಘೋಷಿಸಿದ್ದಾರೆ
ಮೊಬೈಲ್ ಫೋನ್‌ಗಳು ಮತ್ತು ಚಾರ್ಜರ್‌ಗಳನ್ನು ಅಗ್ಗವಾಗಿಸುವುದಾಗಿ ಘೋಷಿಸಿದ್ದಾರೆ.
ಸಾಮಾನ್ಯ ಜನರಿಗೆ ಉಪಯುಕ್ತವಾಗುವ ವಸ್ತುಗಳ ಬಗ್ಗೆ ರಿಲೀಫ್ ಸಿಗುವಂತಹ ಕೆಲವೊಂದು ಘೋಷಣೆಗಳನ್ನು ಮಾಡಿದ್ದಾರೆ.
ನಿರ್ಮಲಾ ಸೀತಾರಾಮನ್ ಬಜೆಟ್‌ನಲ್ಲಿ ಚಿನ್ನ ಮತ್ತು ಬೆಳ್ಳಿಯ ಮೇಲಿನ ಕಸ್ಟಮ್ ಸುಂಕವನ್ನು ಶೇಕಡಾ 6 ಕ್ಕೆ ಇಳಿಸಲು ಪ್ರಸ್ತಾಪಿಸಿದ್ದಾರೆ.
ಸರ್ಕಾರದ ಈ ನಿರ್ಧಾರ ಜಾರಿಯಾದ ನಂತರ ಚಿನ್ನ, ಬೆಳ್ಳಿ, ಪ್ಲಾಟಿನಂ ಬೆಲೆಯಲ್ಲಿ ಇಳಿಕೆಯಾಗಲಿದೆ.
ಮೊಬೈಲ್ ಫೋನ್ ಮತ್ತು ಚಾರ್ಜರ್‌ಗಳ ಮೇಲಿನ ಸುಂಕವನ್ನು ಶೇಕಡಾ 15 ರಷ್ಟು ಕಡಿಮೆ ಮಾಡಲಾಗುತ್ತದೆ.
ಕ್ಯಾನ್ಸರ್ ಚಿಕಿತ್ಸೆಗಾಗಿ ಬಳಸಲ್ಪಡುವ ಮೂರು ಔಷಧಿಗಳಿಗೆ ಮೂಲ ಕಸ್ಟಮ್ಸ್ ಸುಂಕದಿಂದ ವಿನಾಯಿತಿ ನೀಡಲಾಗುವುದು ಎಂದು ಘೋಷಿಸಿದರು.
ಫೆರೋನಿಕಲ್ ಮತ್ತು ಬ್ಲಿಸ್ಟರ್ ತಾಮ್ರದ ಮೇಲಿನ ಮೂಲ ಕಸ್ಟಮ್ ಸುಂಕವನ್ನು ಸರ್ಕಾರ ತೆಗೆದುಹಾಕಿದೆ.