ಶಿವ ಮತ್ತು ಪಾರ್ವತಿ ದೇವಿಯೂ ಬ್ರಹ್ಮಾಂಡ ಸೃಷ್ಟಿಯನ್ನು ಪ್ರತಿನಿಧಿಸುತ್ತಾರೆ. ಶಿವನನ್ನು ಅಲಂಕರಿಸುವ ಚಂದ್ರನಿಗೆ ಈ ದಿನವನ್ನು ಅರ್ಪಿಸಲಾಗಿದೆ ಎಂಬುವುದು ನಂಬಿಕೆ
ಶಿವನಿಗೆ ಹತ್ತಿರವಾಗಲು ಸೋಮವಾರದಂದು ಭಕ್ತರು ಉಪವಾಸ ಮಾಡುತ್ತಾರೆ. ಶಿವನು ತನ್ನ ಭಕ್ತರಿಗೆ ಶಾಶ್ವತ ಶಾಂತಿ, ದೀರ್ಘಾಯುಷ್ಯ ಮತ್ತು ಆರೋಗ್ಯವನ್ನು ಆಶೀರ್ವದಿಸುತ್ತಾನೆ ಎಂದು ನಂಬಲಾಗಿದೆ
ಭಗವಾನ್ ಶಿವ ಮಗುವಿನಂತೆ ಮುಗ್ಧ ಮತ್ತು ಸರ್ವೋತ್ತಮ. ಸೋಮವಾರದಂದು ಶಿವನ ಪೂಜೆಯ ಮುಂಚೆ ಮುಂಜಾನೆ ಸ್ನಾನ ಮಾಡಿ ಮತ್ತು ಮಡಿಯಾದ ಬಿಳಿ ಅಥವಾ ತಿಳಿ ಬಣ್ಣದ ಬಟ್ಟೆಗಳನ್ನು ಧರಿಸಿ ಪೂಜಿಸಬೇಕು. ಶಿವನ ಪೂಜೆಗೆ ಗಂಗಾಜಲ, ಹಾಲಿನ ಮೂಲಕ ಶಿವಲಿಂಗಕ್ಕೆ ಅಭಿಷೇಕ ಮಾಡಬೇಕು
'ಓಂ ನಮಃ ಶಿವಾಯ'' ಎಂದು ಜಪಿಸುವಾಗ ಶ್ರೀಗಂಧ, ಬಿಳಿ ಹೂವುಗಳು ಮತ್ತು ಬಿಲ್ವಪತ್ರೆ ಎಲೆಗಳನ್ನು ಶಿವಲಿಂಗಕ್ಕೆ ಅರ್ಪಿಸಬೇಕು. ಶಿವ ದೇವರು ಬಿಳಿ ಬಣ್ಣವನ್ನು ಇಷ್ಟಪಡುತ್ತಾರೆ. ಆದ್ದರಿಂದ ಸೋಮವಾರ ಬಿಳಿ ಬಣ್ಣದ ಬಟ್ಟೆಗಳನ್ನು ಧರಿಸಿ ಪೂಜೆ ಮಾಡಬೇಡು